ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್ ನ ದಶಮ ಸಂಭ್ರಮಕ್ಕೆ ಉದ್ಯಮಿ, ಸಮಾಜ ಸೇವಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಅವರು ದೊಡ್ಡ ಮೊತ್ತದ ದೇಣಿಗೆಯನ್ನು ನೀಡುವುದಾಗಿ ಘೋಷಿಸಿದ್ದಾರೆ.
ದಶಮಾನೋತ್ಸವ ಸಮಿತಿಯ ಅಧ್ಯಕ್ಷರು ಬರೋಡ ಶಶಿಧರ ಶೆಟ್ಟಿ ಯವರ ವಿಶೇಷ ಮನವಿಗೆ ಸ್ಪಂದಿಸಿದ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರು ಪಟ್ಲ ಫೌಂಡೇಶನ್ ನ ಕಾರ್ಯ ಚಟುವಟಿಕೆಗಳನ್ನು ಮೆಚ್ಚಿ ದೇಣಿಗೆ ನೀಡುತ್ತಿದ್ದಾರೆ. ಉದ್ಯಮಿಯಾಗಿರುವ ಕಾಂಗ್ರೆಸ್ ನ ಮುಖಂಡರಾದ ಉದಯಕುಮಾರ್ “ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ “ನ್ನು ಸ್ಥಾಪಿಸಿ ಅನೇಕ ಸಾಮಾಜಿಕ ಜನಪರ ಕಾರ್ಯಕ್ರಮಗಳನ್ನು ಮಾಡಿದವರು. ಅವರಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷರಾದ ಡಾ ಕನ್ಯಾನ ಸದಾಶಿವ ಶೆಟ್ಟಿ, ಡಾ ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.