ಚತ್ತಿಸ್ ಗಢದಲ್ಲಿ 26 ನಕ್ಸಲರು ಎನ್ ಕೌಂಟರ್!

ಛತ್ತೀಸಗಢ: ಅರಣ್ಯದಲ್ಲಿ ನಕ್ಸಲರ ವಿರುದ್ಧ ಬಿಎಸ್‌ಎಫ್ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಒಟ್ಟು 26 ನಕ್ಸಲರು ಮೃತಪಟ್ಟಿದ್ದಾರೆ.

ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ಮತ್ತೊಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಭುಜ್‌ಮದ್ ಮತ್ತು ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ನಡುವಿನ ದಟ್ಟ ಅರಣ್ಯದಲ್ಲಿ ಬಿಎಸ್‌ಎಫ್ ಹಾಗೂ ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಎನ್‌ಕೌಂಟ‌ರ್ ನಡೆದಿದೆ ಎಂದು ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಜಯ್ ಶರ್ಮಾ ತಿಳಿಸಿದ್ದಾರೆ.

error: Content is protected !!