ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ! ಸೂಟ್‌ ಕೇಸ್‌ ನಲ್ಲಿ ಬಾಲಕಿಯ ಶವ ಪತ್ತೆ!!


ಬೆಂಗಳೂರು: ನಗರದ ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ ಕೇಸ್‌ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.
ಹೊಸೂರು ಮುಖ್ಯರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಅಂದಾಜು ಹತ್ತು ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ. ಚಲಿಸುವ ರೈಲಿನಿಂದ ಸೂಟ್‌ಕೇಸ್ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

error: Content is protected !!