ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದಶಮ ಸಂಭ್ರಮಕ್ಕೆ ಕೊಡುಗೈ ದಾನಿ ಉದ್ಯಮಿ ಕೆ.ಕೆ. ಶೆಟ್ಟಿ ಅವರು ದೊಡ್ಡ ಮೊತ್ತದ ದೇಣಿಗೆ ನೀಡಿದ್ದಾರೆ.
ದಶಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಬರೋಡ ಶಶಿಧರ ಶೆಟ್ಟಿ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಮನವಿಗೆ ಸ್ಪಂದಿಸಿದ ಅಹಮದ್ ನಗರದ ಪ್ರಖ್ಯಾತ ಹೋಟೆಲ್ ಉದ್ಯಮಿ, ಮುಂಡಪಲ್ಲ (ಕಾಸರಗೋಡು) ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೆ. ಶೆಟ್ಟಿ ಅವರು “ಪಟ್ಲ ದಶಮ ಸಂಭ್ರಮಕ್ಕೆ” ದೊಡ್ಡ ಮೊತ್ತದ ಆರ್ಥಿಕ ನೆರವನ್ನು ನೀಡಿದ್ದಾರೆ.
ಪಟ್ಲ ಫೌಂಡೇಶನ್ ಟ್ರಸ್ಟ್ ನ ಕೆಲಸ ಕಾರ್ಯಗಳು ಇದೇ ರೀತಿ ನಿರಂತರವಾಗಿ ಸಾಗಲಿ, ಕಲಾವಿದರ ಪಾಲಿನ ಕಾಮಧೇನು ಆಗಿರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಕೆಕೆ ಶೆಟ್ಟಿ ಹಾರೈಸಿದ್ದಾರೆ.
ಕೆ ಕೆ ಶೆಟ್ಟಿ ಅವರಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಡಾ. ಕನ್ಯಾನ ಸದಾಶಿವ ಶೆಟ್ಟಿ, ಡಾ. ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಹಾಗೂ ಪಟ್ಲ ಟ್ರಸ್ಟ್ ನ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.