ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಚಿತ್ರ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮಡೆನೂರು ಮನು ವಿರುದ್ಧ ಸಹ ಕಲಾವಿದೆಯೇ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ವಿಶೇಷವೆಂದರೆ ನಾಳೆಯೇ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದ್ದು, ಇದೇ ಸಮಯದಲ್ಲಿ ಈತನ ಮೇಲೆ ಎಫ್‌ಐಆರ್ ದಾಖಲಾಗಿದೆ.
– ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದು, ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ.