ಕರಾವಳಿಯಲ್ಲಿ ಮೇ 25ರಿಂದ ಮತ್ತೆ ಭಾರೀ ಮಳೆ ಎಚ್ಚರಿಕೆ! ರೆಡ್‌ ಅಲರ್ಟ್‌


ಮಂಗಳೂರು: ಮೇ 25 ರಿಂದ ರಾಜ್ಯದಲ್ಲಿ ಮತ್ತೆ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮೇ 25ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಬೀಳಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಭಾರೀ ಮಳೆ ಆಗಲಿದೆ. ಹೀಗಾಗಿ ಎರಡು ದಿನ ʻರೆಡ್ ಅಲರ್ಟ್’ ಘೋಷಿಸಲಾಗಿದೆ. ಮೇ 29ರವರೆಗಿನ ಅವಧಿಯಲ್ಲಿ ಬೆಳಗಾವಿ, ಧಾರವಾಡ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗಗ, ರಾಮನಗರ ಜಿಲ್ಲೆಗಳಲ್ಲಿ 110 ಮಿ.ಲೀ.ಗೂ ಹೆಚ್ಚಿನ ಮಳೆ ಆಗುವ ಸಂಭವವಿದೆ. ಮುಂದಿನ ಐದರಿಂದ ಆರು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆಗಲಿದೆ. ಮಳೆ ಬೀಳುವ ಪ್ರದೇಶಗಳಲ್ಲಿ ತಾಪಮಾನ ಕುಸಿಯಲಿದ್ದು, ಎಲ್ಲೆಡೆ ಮಬ್ಬು ವಾತಾವರಣ, ತಂಪು ಗಾಳಿ ಬೀಸಲಿದೆ. ಕರಾವಳಿ ಸೇರಿದಂತೆ ಒಳನಾಡಿನ ಕೆಲವೆಡೆ ಗಾಳಿ ಬೀಸುವಿಕೆ ಹೆಚ್ಚಾಗಲಿದೆ.

error: Content is protected !!