ಮಂಗಳೂರು: ಸ್ನೇಹಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಸುಧಾಕರ ಬನ್ನಂಜೆ ನಿರ್ದೇಶನದ “ಗಂಟ್ ಕಲ್ವೆರ್” ತುಳು ಸಿನಿಮಾದ ಬಿಡುಗಡೆ ಸಮಾರಂಭವು ಭಾರತ್ ಮಾಲ್ ನ ಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ನಡೆಯಿತು.
ಶ್ರೀಮತಿ ಮತ್ತು ಉದಯ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಿನಿಮಾ ಮತ್ತು ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಿರಿಯ ನಿರ್ದೇಶಕ ಡಾ ರಿಚಡ್೯ ಕ್ಯಾಸ್ಟಲಿನೋ ಮಾತನಾಡಿ ತುಳು ಸಿನಿಮಾ ರಂಗಕ್ಕೆ ಸೀಮಿತ ಮಾರುಕಟ್ಟೆ ಇರುವುದರಿಂದ ಪ್ರತಿಯೊಬ್ಬ ತುಳುವನೂ ತುಳು ಸಿನಿಮಾವನ್ನು ನೋಡಿ ಪ್ರೋತ್ಸಾಹಿಸ ಬೇಕು. ಸುಧಾಕರ ಬನ್ನಂಜೆ ಒಳ್ಳೆಯ ನಿರ್ದೇಶಕ, ಬರಹಗಾರ, ಗಂಟ್ ಕಲ್ವೆರ್ ಸಿನಿಮಾದಲ್ಲಿ ಹಾಸ್ಯಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಸಹಕರಿಸಿ ಎಂದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ ತುಳು ಭಾಷೆಯ ಬೆಳವಣಿಗೆಗೆ ತುಳು ಸಿನಿಮಾಗಳ ಕೊಡುಗೆಯೂ ಬಹಳಷ್ಟು ಇದೆ. ಈ ನಿಟ್ಟಿನಲ್ಲಿ ಎಲ್ಲಾ ತುಳುವರು ತುಳು ಸಿನಿಮಾಗಳನ್ನು ನೋಡಿ ಪ್ರೋತ್ಸಾಹಿಸ ಬೇಕಾಗಿದೆ ಎಂದರು.
ಸಮಾರಂಭದಲ್ಲಿ ಸಿನಿಮಾ ವಿತರಕ ಟಿ ಎ ಶ್ರೀನಿವಾಸ್, ಉದ್ಯಮಿ ಸೌಂದರ್ಯ ರಮೇಶ್, ಸಿನಿಮಾ ನಿದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಉದ್ಯಮಿ ಅಡ್ಯಾರ್ ಮಾಧವ ನಾಯಕ್, ಕ್ಯಾಟ್ಕಾ ದ ಅಧ್ಯಕ್ಷ ಲಂಚುಲಾಲ್, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು, ಕಲಾ ನಿರ್ದೇಶಕ ತಮ್ಮ ಲಕ್ಷಣ್, ಉದ್ಯಮಿ ಗಿರೀಶ್ ಎಂ ಶೆಟ್ಟಿ ಕಟೀಲು, ಸುಧಾಕರ ಕುದ್ರೋಳಿ, ಬಾಲಕೃಷ್ಣ ಶೆಟ್ಟಿ, ಮೋಹನ್ ಕೊಪ್ಪಳ, ನಿರ್ದೇಶಕ ಸುಧಾಕರ ಬನ್ನಂಜೆ, ಸಹ ನಿರ್ಮಾಪಕ ರಾಜಾರಾಂ ಶೆಟ್ಟಿ, ಮಮತಾ ಬನ್ನಂಜೆ, ಗಿರೀಶ್ ಎಸ್ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.
ಗಂಟ್ ಕಲ್ವೆರ್ ಸಿನಿಮಾ ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ರೂಪವಾಣಿ, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ, ಪುತ್ತೂರು, ದೇರಳಕಟ್ಟೆಯಲ್ಲಿ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಂಡಿದೆ.
ನಾಯಕನಾಗಿ ಆರ್ಯನ್ ಶೆಟ್ಟಿ ಮತ್ತು ನಾಯಕಿಯಾಗಿ ಸ್ಮಿತಾ ಸುವರ್ಣ ನಟಿಸಿರುವ ಈ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ಉಮೇಶ್ ಮಿಜಾರ್, ರವಿ ಸುರತ್ಕಲ್, ಸುಂದರ ರೈ ಮಂದಾರ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮೊದಲಾದ ಕಲಾವಿದರು ಅಭಿನಯಿಸಿರುವ ಗಂಟ್ ಕಲ್ವೆರ್ ಸಂಪೂರ್ಣ ಹಾಸ್ಯ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ.