ಹೆಬ್ಬಾಳ ಫ್ಲೈ ಓವರ್‌ ಮೇಲೆ ಸರಣಿ ಅಪಘಾತ: ಓರ್ವ ಮೃತ್ಯು

ಬೆಂಗಳೂರು: ಹೆಬ್ಬಾಳ ಫ್ಲೈಓವರ್ ಮೇಲೆ ಮಧ್ಯರಾತ್ರಿ ೧ ಗಂಟೆಯ ಸುಮಾರಿಗೆ ಲಾರಿ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಸದ ಲಾರಿಗೆ ಹಿಂಬದಿಯಿಂದ 10 ಚಕ್ರದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಫಯಾಜ್ ಅಹಮ್ಮದ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

error: Content is protected !!