9 ತಿಂಗಳ ಮಗುವಿನಲ್ಲಿ ಕೊರೋನಾ ಸೋಕು ಪತ್ತೆ !

ಬೆಂಗಳೂರು : ದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಭೀತಿ ಶುರುವಾಗಿದ್ದು, ಬೆಂಗಳೂರಿನಲ್ಲಿ ಒಂಬತ್ತು ತಿಂಗಳ ಮಗುವಿಗೆ ಕೋವಿಡ್ – 19 ಪಾಸಿಟಿವ್ ದೃಢಪಟ್ಟಿದೆ ಹೊಸಕೋಟೆಯ ದಂಪತಿಯ ಮಗುವೊಂದಕ್ಕೆ ಕಳೆದ ಮೂರ್ನಾಲ್ಕು ದಿನದಿಂದ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೇ 22ರಂದು ನಡೆಸಿದ ಪರೀಕ್ಷೆಯಲ್ಲಿ ಮಗುವಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಹಾಗಾಗಿ, ಮಗುವನ್ನು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇ 21 ರಂದು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ 16 ಸಕ್ರಿಯ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ದೃಢಪಡಿಸಿದರು.

ಬೆಂಗಳೂರಿನಲ್ಲಿ ಕೊರೊನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಚ್ಛತೆ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

error: Content is protected !!