ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕುದುರೆ ಸವಾರಿ ಅಕಾಡೆಮಿಯಲ್ಲಿ ಕುದುರೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚೋಟ್ಯಾ ಸುಂದರ್‌(30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಮೇ 17ರಂದು ನಾಗ್ಪುರದ ಗಿಟ್ಟಿಖಾದನ್ ಪ್ರದೇಶದ ಕುದುರೆ ಸವಾರಿ ಅಕಾಡೆಮಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕುದುರೆ ಅಕಾಡೆಮಿಯ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿ ಆರೋಪಿ ಚೋಟ್ಯಾ ಸುಂದರ್‌ ನನ್ನು ಬಂಧಿಸಿದ್ದಾರೆ.
ಆರೋಪಿ ರಾತ್ರಿ ವೇಳೆ ಅಕ್ರಮವಾಗಿ ಕುದುರೆಯ ಹಟ್ಟಿಗೆ ಪ್ರವೇಶಿಸಿ ಒಂದು ಕುರೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!