ರಾಜ್ಯದಲ್ಲಿ ಕೊರೊನಾ 35ಕ್ಕೆ ಏರಿಕೆ, ಭಯಪಡಬೇಕಾಗಿಲ್ಲ: ಅಭಯ ನೀಡಿದ ಆರೋಗ್ಯ ಸಚಿವ

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು, ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಕೆಲವು ಗುಣಲಕ್ಷಣಗಳಿವೆ, ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಯ ನೀಡಿದ್ದಾರೆ.


ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಕೋವಿಡ್ ತಾಂತ್ರಿಕ ಸಮಿತಿ ಸಭೆಯನ್ನು ಶುಕ್ರವಾರ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಲಾಗಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಕೆಲವು ಗುಣಲಕ್ಷಣಗಳಿವೆ, ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, ಎಸ್‌ಎಆರ್‌ಐ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಆಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಬಾಣಂತಿಯರು ಜನ ಹೆಚ್ಚಿರುವ ಕಡೆ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ಯಾರು ಭಯಪಡುವ ಅಗತ್ಯವಿಲ್ಲ. ಕೋವಿಡ್ ಬಂದಿದೆ ಎಂದು ಆತಂಕಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯ ಮಾರ್ಗಸೂಚನೆಯಂತೆ ಮುಂಜಾಗ್ರತೆ ವಹಿಸಿದರೆ ಸಾಕು. ತಕ್ಷಣಕ್ಕೆ ಮಾಸ್ಕ್ ಎಲ್ಲರಿಗೂ ಕಡ್ಡಾಯ ಮಾಡಿಲ್ಲ. ಬಾಣಂತಿಯರು, ಗರ್ಭಿಣಿಯರು ಧರಿಸಬೇಕು ಎಂದು ಸೂಚಿಸಲಾಗಿದೆ. ಸ್ವಚ್ಛತೆ ಕಾಪಾಡಿಕೊಂಡು ಸ್ಯಾನಿಟೈಸರ್ ಬಳಸುವುದು ಉತ್ತಮ. ಸಾರ್ವಜನಿಕರು ಪ್ರಯಾಣ ಮಾಡಲು ಯಾವುದೇ ಅಡ್ಡಿಯಿಲ್ಲ. ಎಲ್ಲರು ಸಹಜ ಜೀವನ ನಡೆಸಬಹುದು. ಮಾಧ್ಯಮಗಳು ಆತಂಕ ಸೃಷ್ಟಿಸುವುದು ಬೇಡ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಧ್ಯಮಗಳಿಂದ ಆಗಲಿ ಎಂದರು.

ಒಂದು ತಿಂಗಳಿಗಾಗುವಷ್ಟು ಟೆಸ್ಟಿಂಗ್ ಕಿಟ್‌ಗಳನ್ನ ತೆಗೆದಿಟ್ಟುಕೊಳ್ಳಲು ಸೂಚಿಸಲಾಗಿದೆ. ಅಗತವಿದ್ದಾಗ ಮಾತ್ರ ಟೆಸ್ಟ್ ಮಾಡಲಾಗುವುದು. ಬೆಂಗಳೂರಿನಲ್ಲಿ 32 ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಕಳೆದ ಒಂದು ವಾರದಲ್ಲಿ ಕೊಂಚ ಏರಿಕೆ ಕಂಡಿದೆ. ಎಲ್ಲವನ್ನು ಮಾನಿಟರ್ ಮಾಡಲಾಗುತ್ತಿದೆ. ಸದ್ಯಕ್ಕೆ ಕೋವಿಡ್ ವಿಚಾರದಲ್ಲಿ ಆತಂಕಪಡುವ ಸ್ಥಿತಿ ಇಲ್ಲ ಎಂದು ಹೇಳಿದರು.

error: Content is protected !!