ರಾಜ್ಯದಲ್ಲಿ ಕೊರೋನಾಗೆ ಮೊದಲ ಬಲಿ!

ಬೆಂಗಳೂರು: ವಿಶ್ವದಲ್ಲಿ ಮತ್ತೆ ಕೊರೋನ ಸೋಂಕು ವೇಗವಾಗಿ ಹರಡುತ್ತಿದ್ದು ಕೋವಿಡ್ ಸೋಂಕಿಗೆ ತುತ್ತಾಗಿ ವೃದ್ಧರೊಬ್ಬರು ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರಿನ ವೈಟ್‌ಫೀಲ್ಡ್‌ ಮೂಲದ 84 ವರ್ಷದ ವೃದ್ಧ ಉಸಿರಾಟದ ಸಮಸ್ಯೆ ಹಾಗೂ ಅಂಗಾಂಗ ವೈಫಲ್ಯ ಖಾಯಿಲೆಗಳಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಸಹ ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 108 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ ಐವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಒಂದು ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಕೇಸ್ ದಾಖಲಾಗಿದೆ.

error: Content is protected !!