ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ತೀವ್ರ ಮಳೆಯಿಂದಾಗಿ ಜನಜೀವನ ಹದಗೆಟ್ಟಿದ್ದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೆಲವೆಡೆ ಕೃತಕ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ಮಳೆ ಇನ್ನೂ ಕೆಲವು ದಿನ ಮುಂದುವರಿಯುವ ಸೂಚನೆಯಿದ್ದು ಈ ನಿಟ್ಟಿನಲ್ಲಿ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.