ರೇಪ್ ಕೇಸ್: ಮನು ಜೈಲುಪಾಲು!

ಬೆಂಗಳೂರು: ಸಹ ಕಲಾವಿದೆಯ ಮೇಲೆ ರೇಪ್ ಪ್ರಕರಣದಲ್ಲಿ ಹಾಸ್ಯ ನಟ ಮಡೆನೂರು ಮನು ಜೈಲುಪಾಲಾಗಿದ್ದಾನೆ. ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.
ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

error: Content is protected !!