ಭಾರೀ ಮಳೆ ಹಿನ್ನೆಲೆ: ಮಡಿಕೇರಿಯಲ್ಲಿ ಹೆಚ್ಚಿನ ಎಚ್ಚರಕ್ಕೆ ಶಾಸಕರ ಸೂಚನೆ

ಮಡಿಕೇರಿ: ಈ ಸಾಲಿನ ಮುಂಗಾರು ಮಳೆ ಸಂದರ್ಭದಲ್ಲಿ ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕ ಡಾ.ಮಂತರ್‍ ಗೌಡ ಅವರು ಸಲಹೆ ಮಾಡಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 376.33 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 353.72 ಮಿ. ಮೀ. ಮಳೆಯಾಗಿತ್ತು. ಮಡಿಕೇರಿ ನಗರಸಭೆ ಸಭಾಂಗಣದಲ್ಲಿ ಶಾಸಕರು ಸಭೆಯನ್ನು ನಡೆಸಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಸೂಚನೆಗಳನ್ನು ನೀಡಿದರು.
ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಸ್ವಚ್ಚಗೊಳಿಸಬೇಕು. ಸಹಾಯವಾಣಿಯ ಆರಂಭ ಸೇರಿದಂತೆ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ತುರ್ತಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಾಗಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕರು ಮನವಿ ಮಾಡಿದರು.

error: Content is protected !!