ಮಂಗಳೂರು: ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಯುವಕನೋರ್ವನನ್ನು ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಇದೀಗ ಬೆಳಕಿಗೆ ಬಂದಿದೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಹತ್ಯೆಗೀಡಾದವನನ್ನು ಕೊಳತ್ತಮಜಲು ನಿವಾಸಿ ಅಬ್ದುಲ್ ರಹೀಂ ಎಂದು ಗುರುತಿಸಲಾಗಿದೆ. ಈತ ಕೊಳತ್ತಮಜಲು ಮಸೀದಿಯ ಕಾರ್ಯದರ್ಶಿ ಎಂದು ತಿಳಿದುಬಂದಿದೆ. ಇನ್ನೊಬ್ಬ ಗಾಯಗೊಂಡಿದ್ದು, ಈತನನ್ನು ಖಲಾಂದರ್ ಶಾಫಿ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿಕ್ ಅಪ್‌ನಲ್ಲಿ ರಹೀಂ ಪಿಕ್ ಅಪ್‌ನಲ್ಲಿ ಬಾಡಿಗೆ ನಡೆಸುತ್ತಿದ್ದರು. ಇರಾಕೋಡಿ ಎಂಬಲ್ಲಿನ ಮನೆಯೊಂದಕ್ಕೆ ರಹೀಂ ಹಾಗೂ ಶಾಫಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಟಕಾಯಿಸಿ ತಲವಾರಿನಿಂದ ಕಡಿದು ಪರಾರಿಯಾಗಿದ್ದಾರೆ.

ಇಬ್ಬರೂ ಗಂಭೀರ ಗಾಯಗೊಂಡಿದ್ದು, ರಹೀಂ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ತೀವ್ರತರದ ಗಾಯಗೊಂಡಿದ್ದ ಶಾಫಿ ಬೊಬ್ಬೆ ಹೊಡೆದಿದ್ದು, ಸ್ಥಳೀಯರು ಆಗಮಿಸಿ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳಲ್ಲು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿ ರಹೀಂ ಮೃತಪಟ್ಟಿದ್ದ ಎಂದು ಹೇಳಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ. ಬಂಟ್ವಾಳ ವ್ಯಾಪ್ತಿಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ವಿಡಿಯೋ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ: