ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ದಿನಾಂಕ: 27.05.2025 ರ ಸಂಜೆ 06.00 ಗಂಟೆಯಿಂದ ದಿನಾಂಕ:30.05.2025 ರ ಸಂಜೆ 06.00 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸುವಂತೆ ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಉಲ್ಲೇಖಿತ ಪತ್ರದಲ್ಲಿ ಕೋರಿರುತ್ತಾರೆ.
ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಹಾಗೂ ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವರದಿಯನ್ನು ಆಧರಿಸಿ, ಸದ್ರಿ ಘಟನೆಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ 163 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ದಿನಾಂಕ: 27.05.2025 ರ ಸಂಜೆ 06.00 ಗಂಟೆಯಿಂದ ದಿನಾಂಕ:30.05.2025 ರ ಸಂಜೆ 06.00 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.