ಮಂಗಳೂರು: ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ಕದ್ರಿ ಪೊಲೀಸರು ಇಂದು ರಾತ್ರಿ ವಶಕ್ಕೆ ಪಡೆದಿದ್ದು ಬಳಿಕ ಬಿಡುಗಡೆ ಮಾಡಿದ್ದಾರೆ.
ಇಂದು ಸಂಜೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ರಹೀಮ್ ಎಂಬ ಟೆಂಪೋ ಚಾಲಕನ ಹತ್ಯೆ ನಡೆದಿದ್ದು ನಗರ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶರಣ್ ಅವರನ್ನು ಆದಿತ್ಯವಾರ ನಡೆದಿದ್ದ ಬಜ್ಪೆ ಚಲೋ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.