ರಹ್ಮಾನ್‌ ಹತ್ಯೆ ಪ್ರಕರಣ: ಕಾಂಗ್ರೆಸ್‌ ಗೆ ತಲೆನೋವಾದ ಮುಸ್ಲಿಂ ಪದಾಧಿಕಾರಿಗಳ ರಾಜೀನಾಮೆ!

ಮಂಗಳೂರು: ಕೊಳತ್ತಮಜಲು ನಿವಾಸಿ ಅಬ್ದುಲ್‌ ರಹ್ಮಾನ್‌ ಹತ್ಯೆ ಪ್ರಕರಣ ಮುಸ್ಲಿಂ ಕಾಂಗ್ರೆಸ್‌ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು, ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಕೈ ಮುಖಂಡರ ವಿರುದ್ಧ ಪ್ರತಿಭಟನೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದು, ಮುಸ್ಲಿಂ ಸಮುದಾಯದ ಯುವಕರ ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎಂಬ ಸಿಟ್ಟಿನಲ್ಲಿ ಈ ರಾಜೀನಾಮೆ ಪರ್ವ ಆರಂಭಗೊಂಡಿದೆ ಎಂದು ತಿಳಿದುಬಂದಿದೆ. ಈಗಾಗಲೇ ಹಲವಾರು ಮಂದಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.

ಕಾರ್ಯಕರ್ತರೊಂದಿಗೆ ಮಹಮ್ಮದ್ ಶಮೀರ್ ರಾಜೀನಾಮೆ

ಮ್ಯಾಗಿ ರೀತಿ ದುಷ್ಕರ್ಮಿಗಳಿಗೆ ಜಾಮೀನು ಸಿಗುತ್ತದೆ; ಅಮಾಯಕರು ಕೊಲೆಯಾಗುತ್ತಿದ್ದಾರೆ: ಉಳ್ಳಾಲ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಮೀರ್ ರಾಜೀನಾಮೆ Maggi-like criminals get bail; innocent people are being killed: Ullal Youth Congress Secretary Shamir resigns , ಮ್ಯಾಗಿ , ದುಷ್ಕರ್ಮಿ, ಜಾಮೀನು, ಅಮಾಯಕರು, ಕೊಲೆ, ಉಳ್ಳಾಲ, ಯುವ ಕಾಂಗ್ರೆಸ್ ಕಾರ್ಯದರ್ಶಿ, ಶಮೀರ್, ರಾಜೀನಾಮೆ, Maggi, criminal, bail, innocent, murder, Ullal, Youth Congress Secretary, Shamir, resignation,
ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಮ್ಮದ್ ಶಮೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಅಬ್ದುಲ್‌ ರಹ್ಮಾನ್‌ ನಂತಹ ಅಮಾಯಕರ ಸಾವಿಗೆ ಸರ್ಕಾರದ ಬೇಜವಾಬ್ದಾರಿತನ ಮತ್ತು ನಿಷ್ಕ್ರಿಯತೆಯೇ ಕಾರಣವಾಗಿದ್ದು, ಜನರಲ್ಲಿ ಪಕ್ಷದ ಬಗ್ಗೆ ವಿಶ್ವಾರ್ಹತೆ ಕುಸಿದಿದೆ. ಕೋಮುವಾದಿ ಶಕ್ತಿಗಳನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ನಿಷ್ಕ್ರಿಯ ಆಡಳಿತವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ. ಶರಣ್ ಪಂಪ್‌ವೆಲ್ ಮತ್ತು ಶ್ರೀಕಾಂತ್ ಶೆಟ್ಟಿಯಂತಹ ದುಷ್ಕರ್ಮಿಗಳು ಗಲಭೆಗೆ ಪ್ರಚೋದನೆ ನೀಡುತ್ತಿದ್ದರೂ, ಅವರು ಸ್ವಚ್ಛಂದವಾಗಿ ತಿರುಗಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಈಗಿನ ಆಡಳಿತದ ನೀತಿಗಳೊಂದಿಗೆ ಒಪ್ಪಿಕೊಳ್ಳಲು ನನಗೆ ಸಾಧ್ಯವಿಲ್ಲ. ಜನರಲ್ಲಿ ಕಾಂಗ್ರೆಸ್ ಪಕ್ಷದ ವಿಶ್ವಾಸವನ್ನು ಮರಳಿ ಗಳಿಸಲು ಗಟ್ಟಿ ನಿರ್ಧಾರಗಳು ಅಗತ್ಯವಾಗಿವೆ. ಆದರೆ, ಪ್ರಸ್ತುತ ಸ್ಥಿತಿಯಲ್ಲಿ, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಯಲು ನನಗೆ ಆಸಕ್ತಿಯಿಲ್ಲ. ಆದ್ದರಿಂದ, ಈ ಸ್ಥಾನದಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನೊಂದಿಗೆ ಹಲವು ಯುವ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ರಾಜೀನಾಮೆ ನೀಡುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಅಪಾರ ಕಾರ್ಯಕರ್ತರೊಂದಿಗೆ ಶಾಹುಲ್ ಹಮೀದ್ ಕೆ.ಕೆ,
ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಕೆ.ಕೆ. ರಾಜೀನಾಮೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಯಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಅವರು ಪ್ರಕಟಿಸಿದ್ದಾರೆ.

ಉಬೈದುಲ್ಲಾ ಕೊಳಕೆ‌ ರಾಜಿನಾಮೆ ರಾಜೀನಾಮೆ


ಕಾಂಗ್ರೆಸ್ ದ್ವಿಮುಖ ಧೋರಣೆ ಖಂಡಿಸಿ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಬೈದುಲ್ಲಾ ಕೊಳಕೆ‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದ್ವೇಷ ಭಾಷಣದ ವಿರುದ್ದ ಕಠಿಣ ನಿಲುವು ತೋರದೆ, ಮುಖಂಡರು ಕರಾವಳಿಯಲ್ಲಿ ಮುಸ್ಲಿಂ ಸಮುದಾಯದ ಕ್ರೋಧಕ್ಕೆ ಗುರಿಯಾಗಿದ್ದಾರೆ. ಅದಕ್ಕಾಗಿ ರಾಜೀನಾಮೆ ಪರ್ವ ಆರಂಭವಾಗಿದೆ ಎಂದು ಆರೋಪಿಸಿದ್ದಾರೆ.

ಸಿಯಾಬುದ್ದೀನ್ ಸುಂಕದಕಟ್ಟೆ ರಾಜೀನಾಮೆ

ಯುವಕ ಅಬ್ದುಲ್ ರಹೀಂ ಎಂಬಾತನ ಹತ್ಯೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿಯಾಬುದ್ದೀನ್ ಸುಂಕದಕಟ್ಟೆ ಅವರು ಬುಧವಾರದಂದು ತನ್ನ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಸರಕಾರದ ಆಡಳಿತ ವ್ಯವಸ್ಥೆಯಿಂದ ತಾನು ಬೇಸೆತ್ತಿದ್ದು, ಜನರಲ್ಲಿ ಕಾನೂನಿನ ಮೇಲಿನ ನಂಬಿಕೆ ಕಡಿಮೆಯಾಗಿದೆ. ಈ ಘಟನೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಜುಗರವಾಗಿದೆ ಎಂದು ಅವರು ತಿಳಿಸಿದ್ದಾರೆ.

ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಬಾತೀಶ್ ಅಳಕೆ ಮಜಲು, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಮದ್ ವಿಟ್ಲ, NSUI ಬೆಳ್ತಂಡಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಮಾನ್ ಫಾರೀಶ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನ್ಸಫ್ ಕರಾಯ, ವಿಟ್ಲ ಉಪ್ಪಿನಂಗಡಿ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನಕ್ಕೆ ಉನೇಸ್ ಗಡಿಯಾರ ಸಹಿತ ತಮ್ಮ ವಿವಿಧ ಘಟಕಗಳಿಗೆ, ವಿವಿಧ ಹುದ್ದೆಗಳಿಗೆ ಮುಸ್ಲಿಂ ಪದಾಧಿಕಾರಿಗಳು ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!