ಉಳ್ಳಾಲ: ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಸೊಸೆ ಅಶ್ವಿನಿಯನ್ನು ರಕ್ಷಿಸಲಾಗಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮ್ಮನ ತೋಳ್ತೆಕ್ಕೆಯಲ್ಲಿ ಭದ್ರವಾಗಿದ್ದ ಮಕ್ಕಳಾದ ಆರ್ಯನ್(3), ಆರುಷ್ (2)ನನ್ನು ಹೊರಕ್ಕೆ ತಂದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮ(54) ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯ ಡಾ.ವಿಕ್ರಂ ಶೆಟ್ಟಿ ತಂಡ ವೈದ್ಯಕೀಯ ಕಾರ್ಯಾಚರಣೆ ನಡೆಸಿತ್ತು.