ಕುಡುಪು: ಕಳೆದ ತಿಂಗಳು ಎ.27ರಂದು ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಕ್ರಿಕೆಟ್ ಟೂರ್ನಮೆಂಟ್ ವೇಳೆ ಕೇರಳ ಮೂಲದ ಅಶ್ರಫ್ ಗುಂಪು ಹತ್ಯೆಗೆ ಸಂಬಂಧಿಸಿ ಇಬ್ಬರು ಆರೋಪಿಗಳಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕೊಲೆ ಪ್ರಕರಣದಲ್ಲಿನ 10ನೇ ಆರೋಪಿ ರಾಹುಲ್ ಮತ್ತು 20ನೇ ಆರೋಪಿ ಸುಶಾಂತ್ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಹಲವಾರು ಮಂದಿ ಜೈಲಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಾ ಒಟ್ಟು ಆರೋಪಿಗಳನ್ನು ಬಂಧಿಸಿದ್ದಾರೆ.