ಮಹಿಳೆಯ ಪ್ರಾಣ ಕಸಿದ ಸಾಂಬಾರ್!

ದೇವನಹಳ್ಳಿ: ಸಾಂಬಾರ್ ವಿಚಾರಕ್ಕೆ ದಂಪತಿ ನಡುವೆ ಉಂಟಾದ ಕಲಹ ಪತ್ನಿಯ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆ ನಾಗರತ್ನ (38) ಎಂದು ತಿಳಿದು ಬಂದಿದೆ.

ದೇವನಹಳ್ಳಿ ತಾಲೂಕಿನ ಸಾವನಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಗಳದ್ದು ಆತ್ಮಹತ್ಯೆಯಲ್ಲ‌ ಕೊಲೆ ಅಂತ ಮಹಿಳೆಯ ತವರು ಮನೆಯವರು ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡನೇ ಕೊಲೆ ಮಾಡಿದ್ದಾನೆ ಎಂದು ಮೃತಳ ಅಣ್ಣ ಮತ್ತು ತಾಯಿ ಆರೋಪ ಮಾಡಿದ್ದಾರೆ.
ಮಹಿಳೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ. ಆದ್ರೆ ಸಾಂಬಾರ್ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಮೃತ ನಾಗರತ್ನ ಗಂಡ ಮತ್ತು ಮಕ್ಕಳ ಹೇಳಿಕೆ ನೀಡಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!