ವಿಟ್ಲ: ತನ್ನ ಫೇಸ್ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಮೂರು ಪೋಸ್ಟ್ಗಳನ್ನು ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೆರುವಾಯಿ ಗ್ರಾಮದ ನಿವಾಸಿ ಯತೀಶ್ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯತೀಶ್ ತನ್ನ ‘ಯತೀಶ್ ಪೆರುವಾಯಿ’ ಫೇಸ್ಬುಕ್ ಖಾತೆಯಲ್ಲಿ ಮಾಡಿರುವ ಪೋಸ್ಟ್ಗಳಿಂದಾಗಿ ಸಮಾಜದ ವಿವಿಧ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಯತೀಶ್ ವಿರುದ್ಧ ದಿನಾಂಕ 31-05-2025 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 72/2025 ರಂತೆ BNS 2023 ರ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಯುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ