ದ.ಕ. ಜಿಲ್ಲೆಯಲ್ಲಿ ಹಿಂದೂ ಮುಖಂಡರ ಮೇಲೆ ಮಾತ್ರ ಕ್ರಮ ಯಾಕೆ: ಕಾರ್ಕಳ ಶಾಸಕ ಸುನಿಲ್‌ ಕುಮಾರ್ ಪ್ರಶ್ನೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿದ್ದು, ಖುದ್ದು ರಾಜ್ಯ ಸರ್ಕಾರವೇ ‘ದ್ವೇಷ ಭಾಷೆ’ಯ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್‌ ಕುಮಾರ್ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್​ಎಸ್​​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಪ್ರಕರಣ ದಾಖಲು, ಜಾಲತಾಣಗಳಲ್ಲಿ ಕೋಮುಪ್ರಚೋದನಕಾರಿ ಸಂದೇಶ ರವಾನಿಸಿದವರ ಮೇಲೆ ಪ್ರಕರಣ ದಾಖಲು ಹಾಗೂ ಅರುಣ್‌ ಪುತ್ತಿಲ ಗಡೀಪಾರು ಆದೇಶ ಹೊರಡಿಸಿದ ಬೆನ್ನಲ್ಲೇ ʻX ́ ನಲ್ಲಿ ರಾಜ್ಕಾಂಯ ಗ್ರೆಸ್‌ ಸರ್ಕಾರದ ವಿರುದ್ಧ ಸುನಿಲ್‌ ಕುಮಾರ್‌ ಕಾರ್ಕಳ ಹರಿಹಾಯ್ದಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ “ಪೊಲೀಸ್ ರಾಜ್” ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ. ದ್ವೇಷ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಖುದ್ದು ರಾಜ್ಯ ಸರ್ಕಾರವೇ ” ದ್ವೇಷ ಭಾಷೆ” ಯ ಪ್ರಚಾರ ನಡೆಸುತ್ತಿದ್ದು, ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದೆ.

ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ತಲವಾರು, ಕತ್ತಿ ಝಳಪಿಸಿ ಹತ್ಯೆಯ ಮಾತುಗಳನ್ನು ಆಡಿದವರನ್ನು ಪೊಲೀಸರು ಏಕೆ ಮುಟ್ಟುತ್ತಿಲ್ಲ? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು‌ ಕ್ರಮವೇ? ಎಂದು ಪ್ರಶ್ನಿಸಿರುವ Sunil Kumar Karkala ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಅವರನ್ನು ಪ್ರಶ್ನಿಸಿ Tag ಮಾಡಿದ್ದಾರೆ.

 

https://x.com/karkalasunil/status/1929428126154596450

 

error: Content is protected !!