ಕಾಪು : ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಕೊರೊನಾದಿಂದ ಸಾವನ್ನಪ್ಪಿದ ಘಟನೆ ಕಾಪು ತಾಲೂಕಿನ ಬೆಳ್ಳೆ ಗ್ರಾಮದಲ್ಲಿ ವರದದಿಯಾಗಿದೆ. ಇಲ್ಲಿನ ನಿವಾಸಿ ಪೀಟರ್ ಮಥಾಯಸ್ (65) ಎಂಬವರು ಮಣಿಪಾಲ ಕೆಂಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಇವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಮಾಹಿತಿ ಪಡೆದ ಕಾಪು ಹಶಿಲ್ದಾರ್ ಡಾ. ಪ್ರತಿಭಾ ಆರ್. ಇಂದು ಅವರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿದರು. ಮನೆಯವರಾರಿಗೂ ಕೋವಿಡ್ ಲಕ್ಷಣಗಳು ಕಂಡು ಬಂದಿಲ್ಲ. ಮೃತದೇಹ ಇನ್ನೂ ಆಸ್ಪತ್ತೆಯಲ್ಲಿಯೇ ಇದ್ದು, ಬುಧವಾರ ಕೋವಿಡ್ SOP ಅನುಸರಿಸಿ ಅಂತ್ಯ ಸಂಸ್ಕಾರ ಕೈಗೊಳ್ಳಲು ತಹಶಿಲ್ದಾರ್ ಸೂಚಿಸಿದ್ದಾರೆ. ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೀಟರ್ ಮಥಾಯಸ್ ಕಳೆದ ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ದೃಢಪಟ್ಟಿತ್ತು.
ತಾಲ್ಲೂಕು ವೈದ್ಯಾಧಿಕಾರಿ ಡಾ. ವಾಸುದೇವ್, ಶಿರ್ವ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ಡಾ. ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.