ಚಲಿಸುತ್ತಿದ್ದ ರಿಕ್ಷಾದಲ್ಲಿಯೇ ಚಾಲಕ ಸಾವು: ಕೊರೊನಾ ಬಳಿಕ ದಿಢೀರ್‌ ಸಾವುಗಳು ಹೆಚ್ಚಳ

ಬೆಳ್ತಂಗಡಿ: ಕೊರೊನಾ ಬಳಿಕ ದಿಢೀರ್‌ ಸಾವುಗಳ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದ್ದು, ಇಡೀ ಜಗತ್ತಿನಲ್ಲಿಯೇ ಆತಂಕ ನೆಲೆಗೊಂಡಿದೆ. ಇದಕ್ಕೆ ಅಪವಾದ ಎಂಬಂತೆ ಬೆಳ್ತಂಗಡಿಯ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ.

ಇವರು ಪ್ರತಿದಿನದಂತೆ ಇಂದು ಬೆಳಿಗ್ಗೆ ಎಂದಿನಂತೆ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವೇಳೆ ಮರಳುತ್ತಿದ್ದರು. ಈ ವೇಳೆ ರಿಕ್ಷಾ ಚಲಾಯಿಸುವ ನಡುವೆಯೇ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳೀಯರು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು.

ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಶರತ್ ಕುಮಾರ್ ಅವರು ತಂದೆ ರಘುರಾಮ ಮಡಿವಾಳ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

error: Content is protected !!