ಸುರತ್ಕಲ್: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಲೆಮರೆಸಿದ್ದ ಆರೋಪಿಯಯರನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪಿ ಅಬ್ದುಲ್ ರಜಾಕ್ (59), ತಂದೆ: ದಿ. ಬಾವ ಅಬ್ದುಲ್ ರೆಹಮಾನ್, ವಾಸ: ಬದ್ರಿಯಾ ಜುಮ್ಮಾ ಮಸೀದಿ ಬಳಿ, ಶಾಂತಿಗುಡ್ಡೆ, ಬಜಪೆ, ಮಂಗಳೂರು.
ಹಾಲಿ ವಾಸ: ಪ್ಲ್ಯಾಟ್ ನಂಬರ್ 605, 313 ಅಪಾರ್ಟಮೆಂಟ್, ಕೆಂಜಾರು, ಮಂಗಳೂರು ಎಂಬಾತನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಈತನು ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆಮರೆಸಿಕೊಳ್ಳಲು ಸಹಕರಿಸಿರುತ್ತಾನೆ.
ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.