ಬೆಂಗಳೂರು ಕಾಲ್ತುಳಿತ ಘಟನೆ: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗುರುವಾರ ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಹೈಕೋರ್ಟ್ ಸ್ವಯಂಪ್ರೇರಿತವಾಗಿ ಈ ಘಟನೆ ಬಗ್ಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಈ ಸಂದರ್ಭದಲ್ಲಿ ಸರ್ಕಾರ ಘಟನೆಯ ಸಂಪೂರ್ಣ ವಿವರ ನೀಡಬೇಕಿದೆ. ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ.

ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಏರಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ -ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದ್ದು ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ.

ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಜನ ಗಾಯಗೊಂಡರೂ ಇನ್ನೂ ಎಫ್ ಐಆರ್ ದಾಖಲಾಗಿಲ್ಲ. ಘಟನೆಯನ್ನು ಕೇವಲ ‘ಅಸಹಜ ಸಾವು (UDR)’ ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

 

 

error: Content is protected !!