ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮೇ 27ರಂದು ನಡೆದಿದ್ದ ಬಡಗ ಬೆಳ್ಳೂರು ಗ್ರಾಮದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ಸಂಜಯ್ (29) ಎಂದು ತಿಳಿದು ಬಂದಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೇರಿದೆ ಎಂದು ತಿಳಿದು ಬಂದಿದೆ.
ಈಗಾಗಲೆ ಕುರಿಯಾಳ ಗ್ರಾಮದ ದೀಪಕ್ (21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್ (21) ಮತ್ತು ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27), ಬಡಗಬೆಳ್ಳೂರು ಗ್ರಾಮದ ರವಿರಾಜ್ (23), ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳೂರು ಗ್ರಾಮದ ತೇಜಾಕ್ಷ (24) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.