ಕಾಲ್ತುಳಿತ ಪ್ರಕರಣ: ಮೂವರು ಆರ್‌ಸಿಬಿ ಆಯೋಜಕರನ್ನು ಬಂಧಿಸಿದ ಸಿಸಿಬಿ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್ ಸಿಬಿ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಮುಂಬೈಗೆ ತೆರಳುತ್ತಿದ್ದ ಆರ್ ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಡಿಎನ್ ಎ ಮ್ಯಾನೇಜ್ ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಬಂಧಿತರು. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ಮಾಡಿದ್ದಾರೆ.

ಆರ್ ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಬಂಧನಕ್ಕೆ ಪ್ರಮುಖ ಕಾರಣಗಳು ಹೀಗಿವೆ.
ಬೆಂಗಳೂರಿನ ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಅಂತ ಪೊಲೀಸರು ಅನುಮತಿ ನಿರಾಕರಿಸಿದ ನಂತರವು ಸೊಶೀಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿರುವುದು.
ಸ್ಟೇಡಿಯಂನಲ್ಲಿ ಸೆಲೆಬ್ರೇಷನ್ ಗೆ ಉಚಿತ ಟಿಕೆಟ್ ಅಂತ ಘೋಷಿಸಿರುವುದು.

error: Content is protected !!