ಕಾರಿಂಜೇಶ್ವರ ದೇವಾಲಯದ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಕಾರಿಂಜ : ಕಾರಿಂಜ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕಾಲೇಜು ವಿದ್ಯಾರ್ಥಿಯೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್‌ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಗಿದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ವಿಷಯ ತಿಳಿಸಿದ್ದು, ಕೂಡಲೇ ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಸ್ಥಳೀಯರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಆವಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

error: Content is protected !!