ಮಂಗಳೂರು: ಜೂನ್ 7ರಿಂದ 9ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಮತ್ತು ಒಳನಾಡಿನ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಗಾಳಿಯೊಂದಿಗೆ ಭಾರೀ ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ಬಾರಿಯ ಮುಂಗಾರು ರಾಜ್ಯದಾದ್ಯಂತ ಉತ್ತಮ ಮಳೆಯನ್ನು ತರುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಮತ್ತು ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ದಾವಣಗೆರೆ, ಹಾಸನ, ರಾಮನಗರ, ಶಿವಮೊಗ್ಗ, ತುಮಕೂರು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.