ಐಸಿಯುನಲ್ಲೇ ರೋಗಿಯ ಮೇಲೆ ನರ್ಸಿಂಗ್ ಸಿಬ್ಬಂದಿಯಿಂದ ಅತ್ಯಾಚಾರ

ರಾಜಸ್ಥಾನ: ಇಲ್ಲಿನ ಇಎಸ್‍ಐಸಿ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಮೆಡಿಕಲ್ ಐಸಿಯುನಲ್ಲಿ ನರ್ಸಿಂಗ್ ಸಿಬ್ಬಂದಿ 32 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಆಸ್ಪತ್ರೆ ಮಟ್ಟದ ತನಿಖೆ ಮತ್ತು ಪೊಲೀಸ್ ಕ್ರಮ ಕೈಗೊಳ್ಳಲಾಗಿದೆ.

ಆರೋಪಿ ಸುಭಾಷ್ ಘೀತಾಳಾ ಆಸ್ಪತ್ರೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಮತ್ತು ಸಿಬ್ಬಂದಿಗೆ ನೋಟಿಸ್ ನೀಡಲಾಗಿದ್ದು, ಅವರ ಲಿಖಿತ ಪ್ರತಿಕ್ರಿಯೆಗೆ ಸೂಚಿಸಲಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ಶನಿವಾರ ಸಂಜೆ ವೇಳೆಗೆ ವರದಿ ಸಲ್ಲಿಸುವ ನಿರೀಕ್ಷೆ ಇದೆ.

 

error: Content is protected !!