ಕಲ್ಬುರ್ಗಿ: ರೌಡಿ ಶೀಟರ್ ಒಬ್ಬನನ್ನು ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ಸುಧಾಕರ್ (32) ಕೊಲೆಯಾದವನು. ಈತ ತನ್ನ ಸಹೋದರನ ಜೊತೆ ಬೈಕ್ ನಲ್ಲಿ ಹೋಗುವ ಸಂದರ್ಭ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.
ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.