ಇಂದಿನಿಂದ 4 ದಿನ ರಾಜ್ಯದೆಲ್ಲೆಡೆ ಭಾರೀ ಮಳೆ ! 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೆ ಇಂದಿನಿಂದ ಜೂನ್ 14ರವರೆಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಲಾಗಿದೆ.

ಜೂನ್‌ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

error: Content is protected !!