ಭಾರೀ ಮಳೆ ಹಿನ್ನೆಲೆ: ಇಂದು ದ.ಕ.-ಉಡುಪಿ, ಕೊಡಗು ಜಿಲ್ಲೆಗಳ ಶಾಲೆಗೆ ರಜೆ ಘೋಷಣೆ

ಮಂಗಳೂರು: ಇಂದು (ಜೂನ್ 12) ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಸರಕಾರಿ, ಖಾಸಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿಯಲ್ಲಿ ಮಳೆ ಆರ್ಭಟ ಜೋರಾಗಿ ಇರಲಿದೆ. ಮುಂಗಾರು ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

error: Content is protected !!