ಅಹಮದಾಬಾದ್ : ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿರುವ ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಗುರುವಾರ ಅಹ್ಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ 241ಮಂದಿ ಮೃತಪಟ್ಟಿದ್ದರು.
ಪ್ರಧಾನಿ ಮೋದಿ ಶುಕ್ರವಾರ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಬ್ರಿಟಿಷ್ ಪ್ರಜೆಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.