ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಧಿಸಿ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಎಂದು ಆದೇಶ ಹೊರಡಿಸಿತ್ತು

error: Content is protected !!