ಗಾಂಧೀನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ ಡ್ರೀಮ್‌ಲೈನರ್ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.
ಈ ದುರಂತದಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರು, ಪೈಲಟ್ ಹಾಗೂ ಸಿಬ್ಬಂದಿ ಹಾಗೂ ವಿಮಾನ ಅಪಘಾತಕ್ಕೀಡಾದ ಸ್ಥಳದಲ್ಲಿದ್ದ ಜನರು ಸೇರಿದ್ದಾರೆ.
ಗುರುವಾರ ಅಹಮದಾಬಾದ್‌ನಿಂದ ಲಂಡನ್ ನ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಈ ಪೈಕಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಮಾತ್ರ ಅಪಘಾತದಲ್ಲಿ ಬದುಕುಳಿದರು.
ದುರಂತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನದಲ್ಲಿದ್ದ ಎರಡು ಬ್ಲ್ಯಾಕ್‌ಬಾಕ್ಸ್‌ಗಳ ಪೈಕಿ ಒಂದು ಪತ್ತೆಯಾಗಿದೆ. ಅದನ್ನು ಅಧಿಕಾರಿಗಳ ತಂಡ ಕೊಂಡೊಯ್ದಿದೆ. ಮತ್ತೊಂದು ಬ್ಲ್ಯಾಕ್‌ಬಾಕ್ಸ್‌ಗಾಗಿ ಹುಡುಕಾಟ ನಡೆಸುತಿದ್ದಾರೆ.