ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ (16.06.2025) ರಜೆಯನ್ನು ಘೋಷಿಸಲಾಗಿರುತ್ತದೆ.
2. ನೀರು ಇರುವ ತಗ್ಗು ಪ್ರದೇಶ. ಕೆರೆ. ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.