ನೆಲಮಂಗಲ: ವೇಗವಾಗಿ ಬಂದ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದ ಕುಣಿಗಲ್ ಬೈಪಾಸ್‌ನಲ್ಲಿ ಸಂಭವಿಸಿದೆ.
ಬೆಂಗಳೂರಿನ ಶ್ರೀರಾಮಪುರದ ಯುವಕ ಪ್ರಜ್ವಲ್ (22), ಯುವತಿ ಸಹನಾ (21) ಮೃತ ದುರ್ದೈವಿಗಳು.
ಕುಣಿಗಲ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಲಾರಿ ಸಮೇತ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.