ಜೂ.19ರವರೆಗೆ ಭಾರೀ ಮಳೆ! ಎಲ್ಲೆಲ್ಲಿ ರೆಡ್‌ ಅಲರ್ಟ್?

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 19, 2025ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮತ್ತು ಕೊಡಗು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದ್ದು ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 19ರವರೆಗೆ ಭಾರೀ ಮಳೆ ಸಾಧ್ಯತೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು, ಬಂಟವಾಳ, ಬೆಳ್ತಂಗಡಿ, ಮೂಡುಬಿದಿರೆ, ಮತ್ತು ಉಪ್ಪಿನಂಗಡಿಯಲ್ಲಿ ತೀವ್ರ ಮಳೆಯಾಗಿದ್ದು, ಜಲಾವೃತ ಮತ್ತು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

error: Content is protected !!