ಉಡುಪಿ: ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಬಂದಿದೆ.
ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಶಾಲೆಯವರು ಪೊಲೀಸರಿಗೆ ತಿಳಿಸಿದ್ದಾರೆ.. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದರು. Anti Sabotage Team, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದೆ.
ಆದರೆ ಯಾವುದೇ ರೀತಿಯ ಸ್ಪೋಟಕ ವಸ್ತುಗಳು ಕಂಡುಬಂದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡೀ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj