ಮಂಗಳೂರು : ನಂತೂರಿನ ತಾರೆತೋಟ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು. ಅವರು ಇತ್ತೀಚೆಗೆ ತಮ್ಮ ಫಿಸಿಯೋಥೆರಪಿ ಪದವಿಯನ್ನು ಪೂರ್ಣಗೊಳಿಸಿ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿದ್ದರು.
ರಾತ್ರಿ 11:45 ರ ಸುಮಾರಿಗೆ ತನ್ನ ಸಿಯಾಜ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ನಂತೂರಿನಿಂದ ಪಂಪ್ವೆಲ್ ಕಡೆಗೆ ಹೋಗುತ್ತಿದ್ದಾಗ, ಅಮಲ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ ಬಳಿ ಅತಿ ವೇಗ ಮತ್ತು ರಸ್ತೆ ಸ್ಕಿಡ್ ಆದ ಕಾರಣ ಕಾರಿನ ನಿಯಂತ್ರಣ ಕಳೆದುಕೊಂಡು ಕಾರು ಸ್ಕಿಡ್ ಆಗಿ, ಡಿವೈಡರ್ಗೆ ಡಿಕ್ಕಿ ಹೊಡೆದು, ಗಾಡಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.
ಅಪಘಾತದಲ್ಲಿ ಅಮಲ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕದ್ರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj