ಭಾರೀ ಮಳೆಗೆ ನೀರು ಮಾರ್ಗದಲ್ಲಿ ಮಳೆಹಾನಿ: ಶಾಸಕ ಭರತ್‌ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಮಸ್ಯೆ ಉಂಟಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೀರುಮಾರ್ಗ ಪಂಚಾಯತ್ ಗೆ ಒಳಪಟ್ಟ ಸರಿಪಲ್ಲ ಭಾಗದ ಪೊಂಪೈನಗರದ 2 ನೇ ರಸ್ತೆ ಸಮೀಪದ ಜನವಸತಿ ಪ್ರದೇಶಗಳಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭೇಟಿ ನೀಡಿದರು.

ಸ್ಥಳ ಪರಿಶೀಲನೆ ನಡೆಸಿದ ಮಾನ್ಯ ಶಾಸಕರು, ಸಂಬಂಧಪಟ್ಟ ರಸ್ತೆಯ ಅಧಿಕಾರಿಗಳೊಂದಿಗೆ ಹಾಗು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಸಮಸ್ಯೆಯ ಕುರಿತು ಚರ್ಚಿಸಿ, ಶೀಘ್ರವಾಗಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

error: Content is protected !!