ಹಲವು ವರ್ಷಗಳ ಬಳಿಕ ಗರ್ಭಿಣಿಯಾಗಿದ್ದ ಹೆಂಡತಿ: ಜು.2ರಂದು ನಿಗದಿಯಾಗಿದ್ದ ಸೀಮಂತ
ಬಂಟ್ವಾಳ: ತುಂಬು ಗರ್ಭಿಣಿ ಹೆಂಡತಿಯನ್ನು ಕೊಂದ ಪತಿರಾಯ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ, ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಸಂಭವಿಸಿದೆ.
ಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ಜಯಂತಿ (45) ಕೊಲೆಗೀಡಾದ ದುರ್ದೈವಿ. ಈಕೆಯ ಗಂಡ ತಿಮ್ಮಪ್ಪ ರಾಮ ಮೂಲ್ಯ (52) ಕೃತ್ಯ ನಡೆಸಿದ ಪಶ್ಚಾತಾಪದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಯಲ್ಲಿ ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿತ್ತು. ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಮಲಗಿದಂತಹ ಸ್ಥಿತಿಯಲ್ಲಿತ್ತು. ಪೊಲೀಸ್ ತನಿಖೆಯ ವೇಳೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಗಂಡನೇ ಹೆಂಡತಿಗೆ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಂದಿರುವುದಾಗಿ ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ದಾರೆ. ಇದರ ಪಶ್ವಾತಾಪದಿಂದ ರಾಮ ಮೂಲ್ಯ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಯಂತಿ ಅವರು ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತಕ್ಕೆ ಮುಹೂರ್ತ ನಿಗದಿಯಾಗಿತ್ತು. ತಿಮ್ಮಪ್ಪರ ಮನೆ ಮಿತ್ತಮಜಲಿನಲ್ಲಿದ್ದು, ಜಯಂತಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಈ ನಡುವೆ ಅವರು ಕೊಲೆಯಾಗಿರುವುದು ಅವರ ಕುಟುಂಬದವರಲ್ಲಿ ದಿಗ್ಭ್ರಮೆ ಮೂಡಿಸಿದೆ. ಬುಧವಾರ ರಾತ್ರಿ 11ರಿಂದ ಗುರುವಾರ ಬೆಳಿಗ್ಗೆ 8 ರ ನಡುವೆ ಈ ಕೊಲೆ ನಡೆದಿದೆ. ಈ ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ತಿಮ್ಮಪ್ಪ, ಜಯಂತಿಯವರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಹಲ್ಲೆ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಜಯಂತಿ ಅವರ ತಂಗಿ ಸುಜಾತ ಫರಂಗಿಪೇಟೆ ಎಂಬವರು ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಮೃತ ತಿಮ್ಮಪ್ಪ ಅವರ ಅಣ್ಣ ವಿಶ್ವನಾಥ ಸಜೀಪ ಮೂಡ ಕೊಲೆ ಆರೋಪಿಸಿದ್ದೂ, ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
For Video:
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj