ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯಲ್ಲಿ ಭಾರೀ ಸರ್ಜರಿ ಮಾಡಲಾಗಿದೆ. ಹಲವು ವರ್ಷಗಳಿಂದ ಕಮಿಷನರೇಟ್ ವ್ಯಾಪ್ತಿಯಲ್ಲೇ ತಳವೂರಿದ್ದ 56 ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಶೇಕ್‌ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಸಿ.ಸಿ.ಬಿ, ಸೆನ್ ಸೇರಿದಂತೆ ಕಮಿಷನರೇಟ್ ಪ್ರದೇಶಕ್ಕೆ ಒಳಪಡುವ ಠಾಣೆಗಳ ಹಲವು ಪೊಲೀಸರು ವರ್ಗಾವಣೆಗೊಂಡಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝https://chat.whatsapp.com/KNFvpivMSm9KnMzmbPMYGj