ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕೆಲವು ಅಹಿತಕರ ಘಟನೆಗಳ ವಾಸ್ತವ ಮತ್ತು ನೈಜತೆಯ ವರದಿ ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ವತಿಯಿಂದ ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೇನ್ ಅವರನ್ನೊಳಗೊಂಡ ನಿಯೋಗವೊಂದನ್ನು ಕಳುಹಿಸಲಾಗಿತ್ತು.
ಈ ನಿಯೋಗ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿ ಎಲ್ಲಾ ಧರ್ಮ, ಸಮುದಾಯದ ಮುಖಂಡರುಗಳನ್ನು ಭೇಟಿ ಮಾಡಿ ವರದಿಯನ್ನು ತಯಾರಿಸಿತ್ತು. ಅದನ್ನು ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ವಿ. ಆರ್ ಸುದರ್ಶನ್, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj