ಪುತ್ತೂರು: ಗಾಯಕಿ ಅಖಿಲಾ ಪಜಿಮಣ್ಣು ತನ್ನ ಪತಿ ಟಿ.ಆರ್. ಧನರಾಜ್ ಶರ್ಮರಿಂದ ವಿವಾಹ ವಿಚ್ಛೇದನ ಕೋರಿ ಪುತ್ತೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇವರಿಬ್ಬರಿಗೆ ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿತ್ತು.
ತ್ತೂರಿನ ಪಜಿಮಣ್ಣು ಎನ್ನುವ ಗ್ರಾಮದ ನಿವಾಸಿಯಾಗಿರುವ ಅಖಿಲಾ ಪಜಿಮಣ್ಣು, ಅಮೆರಿಕಾದಲ್ಲಿ ಇಂಜಿನಿಯರ್ ಆಗಿರುವ ಧನರಾಜ್ ಅವರನ್ನು ವಿವಾಹವಾಗಿದ್ದರು. ಆದರೆ ಇಬ್ಬರೂ ಪುತ್ತೂರು ನ್ಯಾಯಾಲಯದಲ್ಲಿ ಜೂನ್ 12 ರಂದು ವಿಚ್ಛೇದನ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಂದದ ಮೂಲಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದ್ದು, ಇಂದು ನ್ಯಾಯಾಲಯದಲ್ಲಿ ಮತ್ತೆ ವಿಚಾರಣೆ ನಡೆಯಲಿದೆ. ಪುತ್ತೂರಿನ ವಕೀಲ ಮಹೇಶ್ ಕಜೆ ವಾದಿಸುತ್ತಿದ್ದಾರೆ.
ದಂಪತಿ ಅಮೆರಿಕ ದಕ್ಷಿಣ ಕ್ಯಾಲಿಫೋರ್ನಿಯಾದ ಸ್ಯಾನ್ ಹೋಸ್‌ನಲ್ಲಿ ವಾಸವಿದ್ದರು. ಮೈಸೂರಿನ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ 2011 ರಿಂದ 2015ರವರೆಗೆ ವಿದ್ಯಾಭ್ಯಾಸ ಮಾಡಿದ್ದ ಧನಂಜಯ್, ಆ ಬಳಿಕ ನಾರ್ತ್ ಕ್ಯಾರೋಲಿನಾ ಸ್ಟೇಟ್ ಯುನಿವರ್ಸಿಟಿಯಲ್ಲಿ ಕಂಪ್ಯೂಟರ್ ಇಂಜಿನಿಯರಿಂಗ್‌ನಲ್ಲಿ ಮಾಸ್ಟರ್ಸ್ ಡಿಗ್ರಿ ಮಾಡಿರುವ ಪ್ರತಿಭಾವಂತ ಹುಡುಗನೂ ಹೌದು. ಚಿಕ್ಕ ವಯಸ್ಸಿನಲ್ಲಿಯೇ ಧನಂಜಯ್ ಅವರ ಕೈ ಹಿಡಿದಿದ್ದ ಅಖಿಲಾ ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಬಯಸಿದ್ದಾರೆ ಎಂದು ತಿಳಿದುಬಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj