ಜಾನಪದ ಸಮ್ಮೇಳನದಲ್ಲಿ ಗಿರೀಶ್ ಸಾಗರ್‌ಗೆ ʻರಾಜ್ಯ ಯುವ ಸಿರಿ ಪ್ರಶಸ್ತಿʼ

ಮಂಗಳೂರು: ರಾಜ್ಯ ಪ್ರಥಮ ಜಾನಪದ ಸಮ್ಮೇಳನದಲ್ಲಿ ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಸಾಗರ ತಾಲೂಕಿನ ಕರ್ಕಿ ಕೊಪ್ಪದ ಗಾಯಕ ಗಿರೀಶ್ ಸಾಗರ್ ಆಯ್ಕೆಯಾಗಿದ್ದಾರೆ.

ಕನ್ನಡ ಜಾನಪದ ಪರಿಷತ್ ದಶಮಾನೋತ್ಸವದ ಪ್ರಯುಕ್ತ ರಾಜ್ಯಾದ್ಯಂತ ಜಾನಪದ ಸಮ್ಮೇಳನಗಳನ್ನು ಸಂಘಟಿಸುತ್ತಿದ್ದು, ಜೂನ್ 25 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಪ್ರಥಮ ಜಾನಪದ ಸಮ್ಮೇಳನವನ್ನು ಹಿರಿಯ ಐಎಎಸ್ ನಿವೃತ್ತ ಅಧಿಕಾರಿ ಡಾ ಸಿ ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ರಾಜ್ಯದಲ್ಲಿನ ಜನಪದ ಕಲಾವಿದರು, ವಿದ್ವಾಂಸರು, ಜನಪದ ಸಂಘಟಕರು, ಯುವಜನರು, ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ಗಿರೀಶ್ ಸಾಗರ್ ಅವರ ಸಾಧನೆಯನ್ನು ಪರಿಗಣಿಸಿ ಕನ್ನಡ ಜಾನಪದ ಪರಿಷತ್‌ ರಾಜ್ಯ ಪ್ರಥಮ ಜಾನಪದ ಸಮ್ಮೇಳನದಲ್ಲಿ ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ರಾಜ್ಯ ಯುವ ಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅದೇ ರೀತಿ ಜೂನ್ 26 ಕ್ಕೆ ಮಂಡ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಂಡವಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!